ಬಂಧನ
ಶಿಮ್ಲಾ: ಹಿಮಾಚಲ ಪ್ರದೇಶದ 18 ವರ್ಷದ ಯುವಕನ ಮೊಬೈಲ್ ಫೋನ್‌ನಲ್ಲಿ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಸೂಕ್ಷ್ಮ ಕಂಟೆಂಟ್ ಕಂಡುಬಂದಿದ್ದು, ಗುರುವಾರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಸುಕಹಾರ್ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಭಿಷೇಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಸೆಕ್ಷನ್ 152ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಧಾನ ಕಚೇರಿ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.
ಪೊಲೀಸ್ ತಂಡವು ಹಲವು ದಿನಗಳಿಂದ ಶಂಕಿತನನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು, ಗುಪ್ತಚರ ಮಾಹಿತಿ ಸಂಗ್ರಹಿಸುತ್ತಿತ್ತು ಮತ್ತು ಆತನನ್ನು ಕಣ್ಗಾವಲಿನಲ್ಲಿರಿಸಿತ್ತು.
ಗುರುವಾರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ದಾದಾಸೀಬಾ ನೇತೃತ್ವದ ವಿಶೇಷ ತಂಡವು ಆರೋಪಿಯ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆಗಾಗಿ ಆತನನ್ನು ಡೆಹ್ರಾ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಆತನ ಮೊಬೈಲ್ ಫೋನ್‌ನಲ್ಲಿ ಸೂಕ್ಷ್ಮ ಮತ್ತು ಆಕ್ಷೇಪಾರ್ಹ ಕಂಟೆಂಟ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.