ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2020ರಲ್ಲಿ ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಹಿಮಂತ ಬಿಸ್ವ ಶರ್ಮಾ ಹಾಗೂ ಅವರ ಕುಟುಂಬದವರ ವಿರುದ್ಧ ಸಿಸೋಡಿಯಾ ಆರೋಪ ಮಾಡಿದ್ದರು.
ಅಸ್ಸಾಂನ ಕಾಮರೂಪ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಸಿಸೋಡಿಯಾ ಅವರು ತಮ್ಮ ವಿರುದ್ಧ ಮಾಡಿದ್ದ ಆರೋಪ ಸುಳ್ಳು ಮತ್ತು ವಾಸ್ತವಾಂಶ ಆಧರಿಸಿಲ್ಲ ಎಂದು ಶರ್ಮಾ ಹೇಳಿದ್ದಾರೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜುಲೈ 22ಕ್ಕೆ ನಿಗದಿಪಡಿಸಿದೆ.
ಸಿಸೋಡಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499, 500 ಹಾಗೂ 501ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.