ADVERTISEMENT

ಅದಾನಿ ಸಮೂಹ ವಿರುದ್ಧ ತನಿಖೆ ಕೋರಿ ಕಾಂಗ್ರೆಸ್‌ ನಾಯಕಿ ಜಯಾ ‘ಸುಪ್ರೀಂ’ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 13:35 IST
Last Updated 14 ಫೆಬ್ರುವರಿ 2023, 13:35 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ‘ಹಿಂಡನ್‌ಬರ್ಗ್‌ ರಿಸರ್ಚ್’ ಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅದಾನಿ ಸಮೂಹ ಸಂಸ್ಥೆಗಳು ಹಾಗೂ ಉದ್ಯಮಿ ಗೌತಮ್‌ ಅದಾನಿ ಸಹವರ್ತಿಗಳ ವಿರುದ್ಧ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್‌ ನಾಯಕಿ ಜಯಾ ಠಾಕೂರ್‌ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜಯಾ ಠಾಕೂರ್‌ ಅವರು ಕಾಂಗ್ರೆಸ್‌ ಪಕ್ಷದ ಮಧ್ಯಪ್ರದೇಶ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಅದಾನಿ ಸಮೂಹದ ಕಂಪನಿಗಳು ಹಾಗೂ ಅವರ ಸಹವರ್ತಿಗಳು ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಹೀಗಾಗಿ ಸಮೂಹದ ಕಂಪನಿಗಳ ವಿರುದ್ಧ ಸಿಬಿಐ, ಇ.ಡಿ., ಡಿಆರ್‌ಐ, ಸಿಬಿಡಿಟಿ, ಇಐಬಿ, ಎನ್‌ಸಿಬಿ, ಸೆಬಿ, ಆರ್‌ಬಿಐ, ಎಸ್‌ಎಫ್‌ಐಒಗಳಿಂದ ತನಿಖೆ ನಡೆಸಬೇಕು. ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಮೂರ್ತಿಯೊಬ್ಬರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದೂ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಅದಾನಿ ಎಂಟರ್‌ಪ್ರೈಸಸ್‌ನ ಷೇರು ಮಾರಾಟ ಪ್ರಕ್ರಿಯೆಯಲ್ಲಿ ಎಲ್‌ಐಸಿ ಹಾಗೂ ಎಸ್‌ಬಿಐ, ಸಾರ್ವಜನಿಕರ ಕೋಟ್ಯಂತರ ಹಣವನ್ನು ಹೂಡಿಕೆ ಮಾಡಿವೆ. ಹೀಗಾಗಿ, ಈ ಹೂಡಿಕೆಗೆ ಸಂಬಂಧಿಸಿದಂತೆ ಎಲ್‌ಐಸಿ ಹಾಗೂ ಎಸ್‌ಬಿಐಗಳ ಪಾತ್ರ ಕುರಿತ ಕೂಡ ತನಿಖೆ ನಡೆಯಬೇಕು ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.