ADVERTISEMENT

ಹಿಂದಿ ಪ್ರತಿಸ್ಪರ್ಧಿಯಲ್ಲ, ಎಲ್ಲ ಭಾಷೆಗಳ ಮಿತ್ರ ಭಾಷೆ: ಅಮಿತ್ ಶಾ

ಪಿಟಿಐ
Published 14 ಸೆಪ್ಟೆಂಬರ್ 2022, 9:18 IST
Last Updated 14 ಸೆಪ್ಟೆಂಬರ್ 2022, 9:18 IST
ಅಮಿತ್ ಶಾ
ಅಮಿತ್ ಶಾ   

ಸೂರತ್: ಹಿಂದಿ ಭಾಷೆಯು ಪ್ರತಿಸ್ಪರ್ಧಿಯಲ್ಲ, ದೇಶದ ಎಲ್ಲ ಭಾಷೆಗಳ ಮಿತ್ರ ಭಾಷೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಪ್ಪು ಮಾಹಿತಿ ಎಂದು ಅವರು ಹೇಳಿದ್ದಾರೆ.

ಹಿಂದಿ ಜೊತೆ ಜೊತೆಗೆ ಪ್ರಾದೇಶಿಕ ಭಾಷೆಗಳನ್ನು ಬಲಪಡಿಸುವ ಅಗತ್ಯತೆಯನ್ನು ಅವರು ಸೂರತ್‌ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಒತ್ತಿ ಹೇಳಿದರು.

ADVERTISEMENT

‘ನಾನು ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೆಲವರು ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಭಾಷೆಗಳು ಪರಸ್ಪರ ಪ್ರತಿಸ್ಪರ್ಧಿ ಎಂಬ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಹಿಂದಿ ಯಾವುದೇ ಭಾಷೆಗೆ ಪ್ರತಿಸ್ಪರ್ಧಿಯಲ್ಲ. ದೇಶದ ಎಲ್ಲ ಭಾಷೆಗಳ ಮಿತ್ರ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಅವರು ಹೇಳಿದರು.

‘ಎಲ್ಲರೂ ಇದನ್ನು ಒಪ್ಪಿಕೊಳ್ಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು. ಎಲ್ಲಿಯವರೆಗೆ ನಾವು ಭಾಷೆಗಳ ಸಹಬಾಳ್ವೆಯನ್ನು ಒಪ್ಪಿಕೊಳ್ಳುವುದಿಲ್ಲವೋ ಅಲ್ಲಿಯವರೆಗೆ, ನಮ್ಮ ಭಾಷೆಯಲ್ಲಿ ದೇಶವನ್ನು ನಡೆಸುವ ಕನಸನ್ನು ನನಸಾಗಿಸಲು ಸಾಧ್ಯವಿಲ್ಲ. ಅದು ನಮ್ಮ ಗುರಿಯಾಗಬೇಕು ಎಂದು ನಾನು ಪ್ರಾಮಾಣಿಕವಾಗಿ ಹೇಳಲು ಬಯಸುತ್ತೇನೆ. ಎಲ್ಲಾ ಭಾಷೆಗಳನ್ನು ಮತ್ತು ಮಾತೃಭಾಷೆಗಳನ್ನು ಸಮೃದ್ಧವಾಗಿ ಇರಿಸಬೇಕು. ಈ ಎಲ್ಲಾ ಭಾಷೆಗಳ ಏಳಿಗೆಯಿಂದ ಮಾತ್ರ ಹಿಂದಿ ಏಳಿಗೆಯಾಗಲಿದೆ’ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.