ADVERTISEMENT

ಭಾರತದೊಂದಿಗೆ ಧಾರ್ಮಿಕ ಪ್ರವಾಸೋದ್ಯಮ ಪ್ರಸ್ತಾವ ಇಟ್ಟ ಪಾಕಿಸ್ತಾನ

ಪಿಟಿಐ
Published 25 ಜನವರಿ 2022, 16:12 IST
Last Updated 25 ಜನವರಿ 2022, 16:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಇಸ್ಲಾಮಾಬಾದ್‌ (ಪಿಟಿಐ): ಭಾರತದ ಜೊತೆ ಧಾರ್ಮಿಕ ಪ್ರವಾಸೋದ್ಯಮವನ್ನು ಆರಂಭಿಸುವ ಕುರಿತು ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಆಡಳಿತ ಪಕ್ಷದ ಪ್ರಮುಖ ಹಿಂದೂ ಸಂಸದರೊಬ್ಬರು ಪ್ರಸ್ತಾವ ಸಲ್ಲಿಸಿದ್ದಾರೆ. ಇದನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯೂ ಬೆಂಬಲಿಸಿದೆ ಎಂದು ಮೂಲಗಳು ಮಂಗಳವಾರ ಇಲ್ಲಿ ತಿಳಿಸಿವೆ.

ಪ್ರಸ್ತಾವನೆಯು ಭಾರತ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿರುವುದಾಗಿಯೂ ಹೇಳಲಾಗಿದೆ. ಪಾಕಿಸ್ತಾನ ಅಂತರರಾಷ್ಟ್ರೀಯ ವಿಮಾನ ಸಂಸ್ಥೆಯ (ಪಿಐಎ) ವಿಶೇಷ ವಿಮಾನದ ಮೂಲಕ ಪಾಕಿಸ್ತಾನ ಯಾತ್ರಾರ್ಥಿಗಳ ನಿಯೋಗವೊಂದು ಜನವರಿ 29 ರಂದು ಭಾರತಕ್ಕೆ ಹೊರಡಲಿದೆ. ತಾವು ಇದರ ನೇತೃತ್ವ ವಹಿಸುವುದಾಗಿಪಾಕಿಸ್ತಾನ ಹಿಂದೂ ಪರಿಷತ್ತಿನ ಮುಖ್ಯಸ್ಥ ಮತ್ತು ರಾಷ್ಟ್ರ ಸಂಸತ್ತಿನ ಸದಸ್ಯ ಡಾ.ರಮೇಶ್‌ ಕುಮಾರ್‌ ವಂಕ್ವಾನಿ ಹೇಳಿದ್ದಾರೆ.

ಮೂರು ದಿನಗಳ ಕಾಲ ನಿಯೋಗ ಭಾರತದಲ್ಲಿ ಇರಲಿದೆ. ಈ ವೇಳೆ ದೆಹಲಿಯ ನಿಜಾಮುದ್ದೀನ್‌ ಔಲಿಯಾ ದರ್ಗಾ, ಅಜ್ಮೀರ್‌ನ ಖವಾಜ್‌ ಘರೀಬ್‌ ನವಾಜ್‌ ದರ್ಗಾ ಮತ್ತು ಆಗ್ರಾದ ತಾಜ್‌ಮಹಲ್‌ಗೆ ಭೇಟಿ ನೀಡಲು ಯೋಜಿಸಿದೆ ಎಂದು ರಮೇಶ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.