ADVERTISEMENT

ಜೈಪುರ ‌| ದೇವಸ್ಥಾನಕ್ಕೆ ಹಾನಿ: ಹಿಂದೂ ಸಂಘಟನೆಗಳ ಪ್ರತಿಭಟನೆ

ಪಿಟಿಐ
Published 29 ಮಾರ್ಚ್ 2025, 11:35 IST
Last Updated 29 ಮಾರ್ಚ್ 2025, 11:35 IST
ರಾಜಸ್ಥಾನದಲ್ಲಿರುವ ತೇಜಾಜಿ ದೇವಸ್ಥಾನದಲ್ಲಿ ದೇವರ ವಿಗ್ರಹಕ್ಕೆ ಹಾನಿ ಮಾಡಿದವರನ್ನು ಬಂಧಿಸುವಂತೆ ಒತ್ತಾಯಿಸಿ ವಿಎಚ್‌ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟಿಸಿದರು
ರಾಜಸ್ಥಾನದಲ್ಲಿರುವ ತೇಜಾಜಿ ದೇವಸ್ಥಾನದಲ್ಲಿ ದೇವರ ವಿಗ್ರಹಕ್ಕೆ ಹಾನಿ ಮಾಡಿದವರನ್ನು ಬಂಧಿಸುವಂತೆ ಒತ್ತಾಯಿಸಿ ವಿಎಚ್‌ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟಿಸಿದರು   

ಜೈಪುರ: ರಾಜಸ್ಥಾನದ ಟೊಂಕ್ ರಸ್ತೆಯಲ್ಲಿರುವ ತೇಜಾಜಿ ದೇವಸ್ಥಾನದಲ್ಲಿರುವ ಮೂರ್ತಿ ಭಗ್ನಗೊಳಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ನಾಗರಿಕರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸದಸ್ಯರ ಜೊತೆಗೂಡಿ ಶನಿವಾರ ಪ್ರತಿಭಟಿಸಿದರು. 

ಟೊಂಕ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು, ಈ ಕೃತ್ಯವೆಸಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. 

ಈ ಬಗ್ಗೆ ಆಕ್ರೋಶ ಹೆಚ್ಚುತ್ತಿದ್ದಂತೆ ಪ್ರತಿಭಟನಕಾರರ ಸಂಖ್ಯೆಯೂ ಏರಿಕೆಯಾಯಿತು. ಈ ಸಂದರ್ಭದಲ್ಲಿ ಗಲಭೆಕೋರರನ್ನು ಚದುರಿಸಲು ಪೊಲೀಸರು ಲಘು ಬಲಪ್ರಯೋಗ ಮಾಡಿದರು. ಕೆಲವು ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು, ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.