ADVERTISEMENT

ರಾಹುಲ್‌ ಗಾಂಧಿಯನ್ನು ಇತಿಹಾಸ ನೆನಪಿಸಿಕೊಳ್ಳಲಿದೆ: ಮೆಹಬೂಬಾ ಮುಫ್ತಿ

ಸರ್ವಾಧಿಕಾರಿ ಆಡಳಿತದ ವಿರುದ್ಧ ನಿಂತು ಸತ್ಯ ಹೇಳುವ ಏಕೈಕ ರಾಜಕಾರಣಿ ರಾಹುಲ್‌

ಪಿಟಿಐ
Published 16 ಜನವರಿ 2021, 11:38 IST
Last Updated 16 ಜನವರಿ 2021, 11:38 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ಪ್ರಸ್ತುತ ಇರುವಂಥ ಸರ್ವಾಧಿಕಾರಿ ಆಡಳಿತದ ವಿರುದ್ಧ ನಿಂತಿರುವ ರಾಹುಲ್‌ ಗಾಂಧಿ ಅವರನ್ನು ಇತಿಹಾಸ ನೆನಪಿಸಿಕೊಳ್ಳಲಿದೆ ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷ(ಪಿಡಿಪಿ) ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಹೇಳಿದರು.

‘ನವಭಾರತವು ಕೆಲವರ ಹಿಡಿತದಲ್ಲಿದೆ. ರಾಹುಲ್‌ ಗಾಂಧಿ ಅವರನ್ನು ಅಪಹಾಸ್ಯ ಮಾಡುವುದಷ್ಟೇ ನಿಮಗೆ ಬೇಕಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೇಳುವ ಧೈರ್ಯ ಮಾಡುವ ಏಕೈಕ ರಾಜಕಾರಣಿ ರಾಹುಲ್‌ ಗಾಂಧಿ’ ಎಂದು ಟ್ವೀಟ್‌ ಮೂಲಕ ಮುಫ್ತಿ ಶ್ಲಾಘಿಸಿದ್ದಾರೆ.

ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಕೃಷಿ ಸಂಘಟನೆಗಳ ವಿರುದ್ಧ ಕೇಂದ್ರ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಛೂ ಬಿಟ್ಟಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮುಫ್ತಿ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.