ADVERTISEMENT

ಔಷಧಗಳ ಕೊರತೆ:  ಹೆಚ್​ಐವಿ​ ಸೋಂಕಿತರ ಪ್ರತಿಭಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜುಲೈ 2022, 11:19 IST
Last Updated 26 ಜುಲೈ 2022, 11:19 IST

ನವದೆಹಲಿ:ಅಗತ್ಯ ಔಷಧಗಳ ಕೊರತೆ ಉಂಟಾಗಿದೆ ಎಂದು ಹೆಚ್ಐವಿ ಸೋಂಕಿತರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಆ್ಯಂಟಿರೆಟ್ರೋವೈರಲ್ ಔಷಧಗಳ ಕೊರತೆ ಇದೆ ಎಂದು ಆರೋಪಿಸಿರುವ ಹೆಚ್‌ಐವಿ ಸೋಂಕಿತರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನಮಗೆ ಔಷಧಿ ಕೊಡಿ, ನಾವು ಭಿಕ್ಷೆ ಬೇಡುತ್ತಿಲ್ಲ, ನಮ್ಮಹಕ್ಕನ್ನು ಕೇಳುತ್ತಿದ್ದೇವೆ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸಿದರು.

ದೆಹಲಿ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ಕಳೆದ 5 ತಿಂಗಳುಗಳಿಂದ ಹೆಚ್‌ಐವಿ ರೋಗಿಗಳಿಗೆ ಅಗತ್ಯವಿರುವ ಔಷಧಗಳು ಲಭ್ಯವಿಲ್ಲ, ಅಧಿಕಾರಿಗಳಿಗೆ ಈ ಬಗ್ಗೆ ಹಲವು ಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.