ADVERTISEMENT

ಕಾಶ್ಮೀರ: ಹಿಜ್ಬುಲ್ ಕಮಾಂಡರ್ ಹತ್ಯೆ

ಅನಂತ್‌ನಾಗ್‌ನಲ್ಲಿ ಗುಂಡಿನ ಕಾಳಗ: ನಾಗರಿಕ, ಮೂವರು ಸೈನಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 19:31 IST
Last Updated 4 ಜೂನ್ 2022, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಉಗ್ರ ಸಂಘಟನೆಯ ಕಮಾಂಡರ್‌ನನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಮೂವರು ಸೈನಿಕರು ಹಾಗೂ ನಾಗರಿಕರೊಬ್ಬರಿಗೆ ಗಾಯಗಳಾಗಿವೆ.

ಹತ್ಯೆಗೀಡಾದ ಉಗ್ರನನ್ನು ನಿಸಾರ್ ಖಾಂಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ಸೈನಿಕರು ಮತ್ತು ನಾಗರಿಕರೊಬ್ಬರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

‘ಅನಂತ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಸಾರ್ ಖಾಂಡೆ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಸ್ಥಳದಲ್ಲಿ ಒಂದು ಎಕೆ 47 ರೈಫಲ್ ಸೇರಿದಂತೆ ಇತರ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಶುಕ್ರವಾರ ಅನಂತ್‌ನಾಗ್‌ನ ರಿಷಿಪೋರಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಉಗ್ರರು ಪರಾರಿಯಾಗುವ ಮುನ್ನವೇ ಭದ್ರತಾ ಪಡೆಗಳು ಮತ್ತೆ ಕಾರ್ಯಾಚರಣೆ ಕೈಗೊಂಡು ಉಗ್ರನನ್ನು ಹತ್ಯೆ ಮಾಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.