ADVERTISEMENT

ಎರಡು ಪ್ರತ್ಯೇಕ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 11 ಜೂನ್ 2022, 18:41 IST
Last Updated 11 ಜೂನ್ 2022, 18:41 IST
 ಪ್ರಾತಿನಿಧಿಕ ಚಿತ್ರ
 ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಶನಿವಾರ ಹಿಜ್ಬುಲ್‌ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ರಶಿಕ್‌ ಅಹ್ಮದ್‌ ಗನಿ ಎಂಬ ಹೆಸರಿನ ಭಯೋತ್ಪಾದಕನನ್ನು ಗಡಿ ಭದ್ರತಾ ಪಡೆಯ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಜಿಲ್ಲೆಯ ಖಾಂಡಿಪೊರಾ ಪ್ರದೇಶದಲ್ಲಿ ಉಗ್ರರಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆ, ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಭಯೋತ್ಪಾದಕರು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದರು. ಪ್ರತಿದಾಳಿ ನಡೆಸಿದಾಗ ಒಬ್ಬ ಶೌಚ್‌ ಕುಲ‌್ಗಾಮ್‌ ಪ್ರದೇಶದ ಒಬ್ಬ ಭಯೋತ್ಪಾದಕ ಹತನಾದ’ ಎಂದು ಹೇಳಿದರು.

ಪುಲ್ವಾಮಾದ ದ್ರಬ್ಗಮ್‌ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುವ ವೇಳೆ ಭದ್ರತಾ ಪಡೆಯ ಸಿಬ್ಬಂದಿಯಿಂದ ಮತ್ತೊಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.