ADVERTISEMENT

HMPV | ಉಸಿರಾಟದ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ರಾಜ್ಯಗಳಿಗೆ ಕೇಂದ್ರ

ಪಿಟಿಐ
Published 7 ಜನವರಿ 2025, 7:25 IST
Last Updated 7 ಜನವರಿ 2025, 7:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಭಾರತದಲ್ಲಿ ಎಚ್‌ಎಂಪಿ (HMPV) ವೈರಸ್‌ ಪತ್ತೆಯಾದ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯ ಸಭೆ ನಡೆಸಿದ್ದು, ಉಸಿರಾಟದ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಸೋಂಕು ಹರಡುವಿಕೆ ಬಗ್ಗೆ ಎಚ್ಚರಿಕೆ ಇರಿಸಿ ಎಂದು ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಅವರ ನೇತೃತ್ವದಲ್ಲಿ ಸೋಮವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳೊಂದಿಗೆ ವರ್ಚುವಲ್‌ ಸಭೆ ನಡೆಸಲಾಗಿದೆ.

ADVERTISEMENT

ಸಭೆಯಲ್ಲಿ ಐಸಿಎಂಆರ್‌, ರಾಷ್ಟ್ರೀಯ ವೈರಾಲಜಿ ವಿಭಾಗದ ವೈದ್ಯರು ಸೇರಿ ಹಲವರು ಉಪಸ್ಥಿತರಿದ್ದರು. 

ದೇಶದಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಈವರೆಗೆ ಐದು ಎಚ್‌ಎಂಪಿ ವೈರಸ್‌ ಪ್ರಕರಣಗಳು ವರದಿಯಾಗಿವೆ. ಇದು ಎಲ್ಲಾ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಉಸಿರಾಟದ ಸೋಂಕಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಸೋಂಕಿನ ಪ್ರಕರಣಗಳೂ ಅನಿಯಂತ್ರಿತವಾಗಿ ಏರಿಕೆಯಾಗುತ್ತಿಲ್ಲ. ಆದರೆ ಎಲ್ಲಾ ರಾಜ್ಯಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ, ಪರಿಸ್ಥಿತಿಯನ್ನು ಅವಲೋಕಿಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. 

ಉಸಿರಾಟ ಸಂಬಂಧಿ ಸೋಂಕು ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆಯಾಗಿದೆ. ದೇಶವು ಯಾವುದೇ ಸಂಭಾವ್ಯ ಉಲ್ಬಣವನ್ನು ಎದುರಿಸಲು ಸಿದ್ಧವಿದೆ ಎಂದು ಪುಣ್ಯಾ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.