ADVERTISEMENT

ಉತ್ತರ ಪ್ರದೇಶ| ಸಿಎಎ ವಿರೋಧಿಸಿದವರ ಹೆಸರುಗಳ ಫಲಕ ಪ್ರದರ್ಶನ: ನಾಳೆ ತೀರ್ಪು

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2020, 13:08 IST
Last Updated 8 ಮಾರ್ಚ್ 2020, 13:08 IST
ಅಲಹಾಬಾದ್ ಹೈಕೋರ್ಟ್
ಅಲಹಾಬಾದ್ ಹೈಕೋರ್ಟ್    

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್‌ ಫಲಕಗಳನ್ನು ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿತ್ತು.ಈ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಫಲಕಗಳನ್ನು ಪ್ರದರ್ಶಿಸಿರುವ ಪ್ರಕರಣದ ಬಗ್ಗೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್, ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ನ್ಯಾಯಪೀಠವು, ‘ಪ್ರತಿಭಟನಾಕಾರರ ಚಿತ್ರ ಮತ್ತು ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ’ ಎಂದು ಹೇಳಿದ್ದಾರೆ.

ಆರೋಪಿಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ವಿಭಾಗೀಯ ನ್ಯಾಯಪೀಠವು ಸ್ವಪ್ರೇರಣೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಚಾರಣೆ ನಡೆಸಿದ್ದು, ಮಾರ್ಚ್ 9 ಸೋಮವಾರ ಮಧ್ಯಾಹ್ನ 2 ಗಂಟೆಗೆತೀರ್ಪು ಕಾಯ್ದಿರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.