ADVERTISEMENT

ಪುಣೆ ಗೂಗಲ್‌ ಕಚೇರಿಗೆ ಬಾಂಬ್‌ ಬೆದರಿಕೆ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 9:01 IST
Last Updated 13 ಫೆಬ್ರುವರಿ 2023, 9:01 IST
ಗೂಗಲ್‌
ಗೂಗಲ್‌   

ಪುಣೆ: ಇಲ್ಲಿನ ಗೂಗಲ್ ಕಂಪನಿ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿವಾನಂದ್‌ ಬಗಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11 ನೇ ಮಹಡಿಯಲ್ಲಿರುವ ಗೂಗಲ್‌ ಕಚೇರಿ ಆವರಣದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಆರೋಪಿ ಭಾನುವಾರ ರಾತ್ರಿ ಕರೆ ಮಾಡಿದ್ದ. ಕೂಡಲೇ ಕಚೇರಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.