ನವದೆಹಲಿ: ಹೋಳಿ ಹಬ್ಬವು ದೇಶದ ಎಲ್ಲರ ಬಾಳಿನಲ್ಲಿ ಸಂತಸ ಮೂಡಿಬರುವಂತೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
‘ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಸಂಕೇತವಾದ ಈ ಬಣ್ಣದ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಸಂತಸದ ಬಣ್ಣ ಮೂಡಿಸಲಿ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹೋಳಿ ಹಬ್ಬ: ಕಾಮನ ಸ್ವಾಗತಕ್ಕೆ ವಸಂತದ ಉತ್ಸವ
ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ ಸೇರಿದಂತೆ ಅನೇಕ ಗಣ್ಯರು ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.