ADVERTISEMENT

ಹೋಳಿ ಮೆರವಣಿಗೆ: ಉ.ಪ್ರದ ಶಹಜಹಾನ್‌ಪುರದ 20 ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಕೆ

ಪಿಟಿಐ
Published 12 ಮಾರ್ಚ್ 2025, 14:26 IST
Last Updated 12 ಮಾರ್ಚ್ 2025, 14:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಪಿಟಿಐ ಚಿತ್ರ)

ಶಹಜಹಾನ್‌ಪುರ(ಉತ್ತರ ಪ್ರದೇಶ): ನಗರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ.

ADVERTISEMENT

‘‘ಲಾಡ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ 20 ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಸಲಾಗುವುದು. ಈ ಮಾರ್ಗದುದ್ದಕ್ಕೂ 350 ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ವಿಪಿನ್‌ ಕುಮಾರ್ ಮಿಶ್ರಾ ಹೇಳಿದ್ದಾರೆ.

‘ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಫ್‌ಫಾರ್ಮರ್‌ಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ’ ಎಂದೂ ಹೇಳಿದ್ದಾರೆ.

‘ಲಾಟ್‌ ಸಾಹೇಬ್’ ಮೆರವಣಿಗೆ 18ನೇ ಶತಮಾನದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ. ಬ್ರಿಟಿಷ್‌ ಅಧಿಕಾರಿಯಂತೆ ವೇಷ ತೊಟ್ಟ ವ್ಯಕ್ತಿ ಎತ್ತಿನ ಗಾಡಿಯಲ್ಲಿ ಕುಳಿತುಕೊಂಡಿರುತ್ತಾನೆ. ಈ ಗಾಡಿ ಸಾಗುವಾಗ ಜನರು ಈ ವ್ಯಕ್ತಿಯತ್ತ ಪಾದರಕ್ಷೆಗಳನ್ನು ಎಸೆಯುತ್ತಾರೆ. ಈ ವಿಧಿಯೊಂದಿಗೆ ಹೋಳಿ ಆಚರಣೆಗೆ ಚಾಲನೆ ಸಿಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.