ADVERTISEMENT

ಮತ್ತೆ ಏಮ್ಸ್‌ಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಜೆನ್ಸೀಸ್
Published 13 ಸೆಪ್ಟೆಂಬರ್ 2020, 2:27 IST
Last Updated 13 ಸೆಪ್ಟೆಂಬರ್ 2020, 2:27 IST
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ   

ನವದೆಹಲಿ: ಕೋವಿಡ್-19 ನಂತರದ ಚಿಕಿತ್ಸೆಗೆ ಒಳಪಟ್ಟು ಆಗಸ್ಟ್ 31 ರಂದು ಏಮ್ಸ್‌ನಿಂದ ಬಿಡುಗಡೆಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್‌ಗೆ ದಾಖಲಿಸಲಾಗಿದೆ.

ಆಗಸ್ಟ್ 2ರಂದು ಕೊರೊನಾ ವೈರಸ್ ಸೋಂಕು ತಗುಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಗಸ್ಟ್ 14ರಂದು ನಡೆಸಿದ ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಬಳಲಿಕೆ ಮತ್ತು ಮೈಕೈ ನೋವಿಂದಾಗಿ ಅವರನ್ನು ಮತ್ತೆ ಏಮ್ಸ್‌ಗೆ ದಾಖಲಿಸಲಾಗಿತ್ತು.

ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ನಂತರ ಅವರು ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 'ಅವರ ಮೇಲೆನಿರಂತರವಾಗಿ ನಿಗಾವಹಿಸಲು ಆಸ್ಪತ್ರೆಯಲ್ಲಿಯೇ ಇರುವುದು ಉತ್ತಮ ಎಂದು ಭಾವಿಸಲಾಗಿದೆ' ಎಂದು ಏಮ್ಸ್ ಮೂಲವೊಂದು ತಿಳಿಸಿದೆ.

ADVERTISEMENT

ಏಮ್ಸ್ ಆಸ್ಪತ್ರೆಯ ಕಾರ್ಡಿಯೊ ನ್ಯೂರೊ ಟವರ್‌ ವಿಭಾಗಕ್ಕೆ ರಾತ್ರಿ 11 ಗಂಟೆಗೆ ಅವರನ್ನು ದಾಖಲಿಸಲಾಗಿದೆ. ಸದ್ಯ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.