ADVERTISEMENT

ಬಿಎಸ್‌ಎಫ್‌ ಧ್ವಜ ದಿನಾಚರಣೆ ಕಾರ್ಯಕ್ರಮಕ್ಕೆ ಅಮಿತ್‌ ಶಾ ಗೈರು

ಪಿಟಿಐ
Published 1 ಡಿಸೆಂಬರ್ 2020, 5:39 IST
Last Updated 1 ಡಿಸೆಂಬರ್ 2020, 5:39 IST
ಅಮಿತ್‌ ಶಾ
ಅಮಿತ್‌ ಶಾ   

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅಧಿಕೃತ ಕೆಲಸದಿಂದಾಗಿ ಬಿಎಸ್‌ಎಫ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಬಿಎಸ್‌ಎಫ್‌ನ 56ನೇ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು.

‘ಕೆಲವು ಅಧಿಕೃತ ಕೆಲಸಗಳಿಂದಾಗಿ ಅಮಿತ್‌ ಶಾ ಅವರಿಗೆ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ’ ಎಂದು ಗೃಹಸಚಿವಾಲಯವು ಬಿಎಸ್‌ಎಫ್‌ಗೆ ತಿಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ಇದೀಗ ಅಮಿತ್‌ ಶಾ ಅವರ ಬದಲಿಗೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್‌ ರೈ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.