
ಪಿಟಿಐ
ನವದೆಹಲಿ: ದೇಶದ 1,466 ಪೊಲೀಸ್ ಸಿಬ್ಬಂದಿಗೆ ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕ ಲಭಿಸಿದೆ.
ವಿವಿಧ ರಾಜ್ಯಗಳಲ್ಲಿ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತ್ತು ಕೇಂದ್ರ ಸಂಸ್ಥೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಪದಕಕ್ಕೆ ಅರ್ಹರಾದವರ ಪಟ್ಟಿಯನ್ನು ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ಪ್ರತಿ ವರ್ಷ ಅಕ್ಟೋಬರ್ 31ರಂದು ಸರ್ದಾರ್ ವಲ್ಲಭಾಬಾಯಿ ಪಟೇಲ್ ಅವರ ಜನ್ಮಾದಿನಾಚರಣೆಯ ಸಂದರ್ಭದಲ್ಲಿ ಕೇಂದ್ರೀಯ ಗೃಹಮಂತ್ರಿ ದಕ್ಷತಾ ಪದಕ ಪಡೆದವರ ಹೆಸರನ್ನು ಘೋಷಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.