ADVERTISEMENT

Covid-19 India Update: 68,020 ಹೊಸ ಪ್ರಕರಣ, ದೈನಂದಿನ ಏರಿಕೆಯಲ್ಲಿ ದಾಖಲೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 5:35 IST
Last Updated 29 ಮಾರ್ಚ್ 2021, 5:35 IST
   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 68,020 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರ್ಷದ ಅತ್ಯಧಿಕ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 32,231 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 291 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಹಾಗಾಗಿ, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ಇದರಲ್ಲಿ 1,13,55,993 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ಧಾರೆ. 5,21,808 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 1,61,843ಕ್ಕೆ ಏರಿಕೆಯಾಗಿದೆ.

ಕೊರೊನಾ ತಡೆಗೆ ನಡೆಯುತ್ತಿರುವ ದೇಶದ ಬೃಹತ್ ಲಸಿಕಾ ಅಭಿಯಾನದಲ್ಲಿ ಇದುವರೆಗೆ 6,05,30,435 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.