ADVERTISEMENT

ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪಿಟಿಐ
Published 21 ಜೂನ್ 2025, 15:42 IST
Last Updated 21 ಜೂನ್ 2025, 15:42 IST
<div class="paragraphs"><p>ಸೋನಮ್‌ ಹಾಗೂ ರಾಜಾ ರಘುವಂಶಿ</p></div>

ಸೋನಮ್‌ ಹಾಗೂ ರಾಜಾ ರಘುವಂಶಿ

   

ಶಿಲ್ಲಾಂಗ್‌: ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಅವರ ಹತ್ಯೆಗೆ ಸಂಬಂಧಿಸಿ ಪತ್ನಿ ಸೋನಮ್‌ ರಘುವಂಶಿ ಮತ್ತು ಆಕೆಯ ಪ್ರಿಯಕರ ಎನ್ನಲಾದ ರಾಜ್‌ ಅವರನ್ನು 13 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಮೇಘಾಲಯ ನ್ಯಾಯಾಲಯವು ಶನಿವಾರ ನೀಡಿದೆ.

ಈ ಇಬ್ಬರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿಯು ಶನಿವಾರಕ್ಕೆ ಮುಕ್ತಾಯಗೊಂಡಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಇಬ್ಬರ ಪೊಲೀಸ್‌ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿಕೊಳ್ಳಲಿಲ್ಲ. ಆದ್ದರಿಂದ ನ್ಯಾಯಾಲಯವು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.