ADVERTISEMENT

ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ನಕಲಿ ಮದ್ಯ ಸೇವಿಸಿ 38 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 11:12 IST
Last Updated 8 ಫೆಬ್ರುವರಿ 2019, 11:12 IST
   

ಲಖನೌ: ಉತ್ತರಪ್ರದೇಶದ ಶಹರಣ್ ಪುರ್, ಖುಷಿನಗರ್ ಜಿಲ್ಲೆ ಮತ್ತು ಉತ್ತರಾಖಂಡದ ರೂರ್ಕಿಯಲ್ಲಿ ಶುಕ್ರವಾರನಕಲಿ ಮದ್ಯ ಸೇವಿಸಿ 38 ಮಂದಿ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದೇಶದ ಶಹರಣ್ ಪುರ್‌ನಲ್ಲಿ ಈ ಘಟನೆ ಮೊದಲು ವರದಿಯಾಗಿದ್ದು 16 ಮಂದಿ ಸಾವನ್ನಪ್ಪಿದ್ದಾರೆ. ಹರಿದ್ವಾರದಲ್ಲಿ 12 ಮಂದಿ ಸಾವಿಗೀಡಾಗಿರುವುದಾಗಿ ನ್ಯೂಸ್ 18 ವರದಿ ಮಾಡಿದೆ.

ಶಹರಣ್‍ಪುರದ ಉಮಾಹಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಅಸ್ವಸ್ಥರಾದ 10 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇವರು ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿತ್ತು.

ADVERTISEMENT

ಖುಷಿ ನಗರ ಜಿಲ್ಲೆಯಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ ಎಂದು ಖುಷಿನಗರ್ ಜಿಲ್ಲಾ ಮೆಜಿಸ್ಟ್ರೇಟ್ ಅನಿಲ್ ಕುಮಾರ್ ಹೇಳಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ಈಗಾಗಲೇ ಬಂಧಿಸಿದ್ದು, ತನಿಖೆ ಮುಂದುವರಿದಿದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.

ಇನ್ನೊಂದು ಘಟನೆಯಲ್ಲಿ ಉತ್ತರಾಖಂಡದ ರೂರ್ಕಿಯಲ್ಲಿ ನಕಲಿ ಮದ್ಯ ಸೇವಿಸಿ 14 ಮಂದಿ ಸಾವಿಗೀಡಾಗಿದ್ದಾರೆ.ಈ ಪ್ರಕರಣದಲ್ಲಿ 13 ಮಂದಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಲಾಗಿದೆ.

ಉತ್ತರಪ್ರದೇಶದಲ್ಲಿ ನಡೆದ ಮದ್ಯ ದುರಂತದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದು, ದುರಂತದಲ್ಲಿ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.