ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ 2011ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಅಪರಾಧಿಗೆ ಮರಣದಂಡನೆ ಹಾಗೂ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೂಗ್ಲಿಯ ಜಿಲ್ಲಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
2011ರಲ್ಲಿ ಹೂಗ್ಲಿಯಲ್ಲಿನ ಶಾಲೆಯ ಸಮಿತಿ ಚುನಾವಣೆ ವೇಳೆ ನಯೀಮುದ್ದೀನ್ ಶೇಖ್ ಎನ್ನುವವರನ್ನು ಕೊಲೆ ಮಾಡಲಾಗಿತ್ತು. ಶೇಖ್ ಅವರ ಪತ್ನಿ 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ತನಿಖೆ ನಡೆಯುತ್ತಿದ್ದಾಗಲೇ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 19 ಜನರನ್ನು ತಪ್ಪಿತಸ್ಥರು ಎಂದು ಹೇಳಿತ್ತು.
ಅರಮ್‌ಬಾಗ್ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಾಧೀಶ, ಬಾಲಾದೇವ್ ಪಾಲ್ ಎನ್ನುವಾತನಿಗೆ ಗಲ್ಲು ಶಿಕ್ಷೆ ವಿಧಿಸಿ ಇತರ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.