ಲಖನೌ: ಗೋಹತ್ಯೆ ನಿಷೇಧ ಮತ್ತು ಗೋವನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವ ಕುರಿತು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ಕೈಗೊಳ್ಳುವ ನಂಬಿಕೆ ಇದೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ವಿಶ್ವಾಸ ವ್ಯಕ್ತಪಡಿಸಿದೆ.
‘ನಾವು ಜಾತ್ಯತೀತ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ ಮತ್ತು ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಹಿಂದೂ ಧರ್ಮದಲ್ಲಿ ಹಸುವನ್ನು ದೈವಿಕ ಪ್ರತಿನಿಧಿ ಎಂದು ನಂಬಲಾಗುತ್ತಿದೆ. ಈ ಕಾರಣಕ್ಕೆ ಅದನ್ನು ಸಂರಕ್ಷಿಸಬೇಕು ಮತ್ತು ಪೂಜಿಸಬೇಕು’ ಎಂದು ನ್ಯಾಯಮೂರ್ತಿ ಶಮೀಮ್ ಅಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ಪ್ರದೇಶದ ಗೋಹತ್ಯೆ ತಡೆ ಕಾಯ್ದೆ 1955ರ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ಶಮೀಮ್ ಅಹಮ್ಮದ್ ಅವರು ಈಚೆಗೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಪೊಲೀಸರು ತನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅದನ್ನು ರದ್ದುಗೊಳಿಸಬೇಕೆಂದು ಕೋರಿ ಬಾರಾಬಂಕಿ ನಿವಾಸಿ ಮೊಹಮ್ಮದ್ ಅಬ್ದುಲ್ ಖಾಲಿದ್ ಎಂಬುವವರು ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.