ADVERTISEMENT

ಮುಂಗಾರು ಅಧಿವೇಶನದಲ್ಲಿ ಸೈನಿಕರ ಬೆಂಬಲಕ್ಕೆ ನಿಲ್ಲುವ ಸಂದೇಶ ರವಾನೆ: ಮೋದಿ ಆಶಯ

ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ

ಪಿಟಿಐ
Published 14 ಸೆಪ್ಟೆಂಬರ್ 2020, 6:20 IST
Last Updated 14 ಸೆಪ್ಟೆಂಬರ್ 2020, 6:20 IST
ಸಂಸತ್ ಭವನ
ಸಂಸತ್ ಭವನ   

ನವದೆಹಲಿ: ಈ ಮುಂಗಾರು ಅಧಿವೇಶನ ದೇಶದ ಗಡಿಗಳನ್ನು ಕಾಯುತ್ತಿರುವ ಯೋಧರ ಹಿಂದೆ ದೇಶ ನಿಂತಿದೆ ಎಂಬ ಒಗ್ಗಟ್ಟಿನ ಸಂದೇಶವನ್ನು ಸಾರುವ ವಿಶ್ವಾಸವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಸೋಮವಾರ ಮುಂಗಾರು ಅಧಿವೇಶನದ ಆರಂಭಕ್ಕೂ ಮುನ್ನ ಹೇಳಿಕೆ ನೀಡಿರುವ ಅವರು, ’ಮುಂದಿನ ದಿನಗಳಲ್ಲಿಯೂ ಸಂಭವಿಸಬಹುದಾದ ಹಿಮಪಾತದಂತಹ ಸಂಕಷ್ಟಗಳನ್ನು ಎದುರಿಸುತ್ತಾ ಧೈರ್ಯದಿಂದ ದೇಶವನ್ನು ಯೋಧರು ರಕ್ಷಿಸಲಿದ್ದಾರೆ’ ಎಂದರು.

ಮುಂಗಾರು ಅಧಿವೇಶನದಲ್ಲಿ ಪ್ರಮುಖವಾದ ವಿಷಯಗಳ ಚರ್ಚೆಗಳು ನಡೆಯಲಿದ್ದು, ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ. ಸಂಸದರು ಈ ಎಲ್ಲ ಚರ್ಚೆಗಳಲ್ಲೂ ಭಾಗವವಹಿಸಿ ಮಾಹಿತಿ ಹಂಚಿಕೊಳ್ಳತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕೋವಿಡ್ 19 ಸಾಂಕ್ರಾಮಿಕ ರೋಗದ ನಡುವೆ ಸಂಸದರು ತಮ್ಮ ಕರ್ತವ್ಯ ನಿರ್ವಹಿಸಿಲು ಅಧಿವೇಶನದಲ್ಲಿ ಭಾಗವಹಿಸುತ್ತಿದ್ದು, ಅವರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.