ADVERTISEMENT

ಪಕ್ಷ ಮುನ್ನಡೆಸಲು ರಾಹುಲ್‌ ಮೇಲೆ ಒತ್ತಡ

ಕಾಂಗ್ರೆಸ್‌ ಅಧ್ಯಕ್ಷರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು

ಪಿಟಿಐ
Published 1 ಜುಲೈ 2019, 20:15 IST
Last Updated 1 ಜುಲೈ 2019, 20:15 IST
ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಹೊರಬಂದ ಮುಖ್ಯಮಂತ್ರಿಗಳಾದ ರಾಜಸ್ಥಾನದ ಅಶೋಕ್‌ ಗೆಹ್ಲೋಟ್‌, ಮಧ್ಯಪ್ರದೇಶದ ಕಮಲ್‌ನಾಥ್‌, ಪಂಜಾಬ್‌ನ ಅಮರಿಂದರ್‌ ಸಿಂಗ್‌, ಛತ್ತೀಸಗಡದ ಭೂಪೇಶ್‌ ಬಘೇಲ್‌, ಪುದುಚೆರಿಯ ವಿ. ನಾರಾಯಣ ಸ್ವಾಮಿ.

ನವದೆಹಲಿ: ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸೋಮವಾರ ಭೇಟಿಮಾಡಿ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒತ್ತಾಯ ಮಾಡಿದ್ದಾರೆ.

ಭೇಟಿಯ ನಂತರ ಮಾಧ್ಯಮಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಆ ಕುರಿತ ವಿವರ ನೀಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ‘ನಮ್ಮ ಬೇಡಿಕೆಯನ್ನು ಅವರ ಮನ್ನಿಸು ತ್ತಾರೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೇವೆ’ ಎಂದರು.

‘ಲೋಕಸಭಾ ಚುನಾವಣೆಯಲ್ಲಾದ ಸೋಲಿನ ಬಗ್ಗೆ ರಾಹುಲ್‌ ಜೊತೆ ಚರ್ಚೆ ನಡೆಸಿ, ನಮ್ಮ ಮತ್ತು ದೇಶಾದ್ಯಂತ ಇರುವ ಪಕ್ಷದ ಎಲ್ಲಾ ಕಾರ್ಯಕರ್ತರ ಭಾವನೆ ಹಾಗೂ ಚಿಂತನೆಗಳನ್ನು ಅವರ ಮುಂದಿಟ್ಟಿದ್ದೇವೆ. ಸುಮಾರು ಎರಡು ಗಂಟೆಗಳ ಕಾಲ ತುಂಬ ಭಾವನಾತ್ಮಕವಾಗಿ ಮತ್ತು ವಿಸ್ತಾರವಾಗಿ ಚರ್ಚಿಸಿ ದ್ದೇವೆ. ಅಧ್ಯಕ್ಷ ಸ್ಥಾನದಲ್ಲಿ ನೀವೇ ಮುಂದ ವರಿಯಬೇಕು ಎಂದು ಮನವಿ ಮಾಡಿದ್ದೇವೆ. ಅವರು ನಮ್ಮ ಮನವಿಗೆ ಒಪ್ಪುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.