ADVERTISEMENT

ಜ್ಞಾನವಾಪಿ: ಕೆಳನ್ಯಾಯಾಲಯದ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ ನೀಡಲಿದೆ– ಓವೈಸಿ

ಪಿಟಿಐ
Published 18 ಮೇ 2022, 3:56 IST
Last Updated 18 ಮೇ 2022, 3:56 IST
   

ಹೈದರಾಬಾದ್: ಮುಂದಿನ ವಿಚಾರಣೆಯ ಸಮಯದಲ್ಲಿ ಜ್ಞಾನವಾಪಿ ವಿಷಯದ ಕುರಿತು ಕೆಳ ನ್ಯಾಯಾಲಯದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮತ್ತು ಸಂಪೂರ್ಣ ನ್ಯಾಯ ಕೊಡುವ ಭರವಸೆ ಇದೆ ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.

ವಾರಾಣಸಿ ನ್ಯಾಯಾಲಯವು ನಮಾಜ್‌ ಮಾಡುವವರ ಸಂಖ್ಯೆಯನ್ನು 20 ಕ್ಕೆ ಸೀಮಿತಗೊಳಿಸಿ ವಾರಾಣಸಿ ಸ್ಥಳೀಯ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ‘ಗಂಭೀರ ಕಾರ್ಯವಿಧಾನದ ಅನ್ಯಾಯ ಸಂಭವಿಸಿದೆ’ಎಂದು ಹೇಳಿದ್ದಾರೆ.

ವಿಡಿಯೊ ಸಮೀಕ್ಷೆಯಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾದ ಜ್ಞಾನವಾಪಿ ಮಸೀದಿಯ-ಶೃಂಗಾರ್ ಗೌರಿ ಸಂಕೀರ್ಣದೊಳಗಿನ ಪ್ರದೇಶದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ವಾರಾಣಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿತ್ತು. ಜೊತೆಗೆ, ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಿತ್ತು.

ADVERTISEMENT

‘ಜ್ಞಾನವಾಪಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಹಿಂದೆ ಕೆಳ ನ್ಯಾಯಾಲಯವು 20 ಮಂದಿಗೆ ಮಾತ್ರ ನಮಾಜ್‌ಗೆ ಅವಕಾಶ ನೀಡಿತ್ತು. ಹೀಗಾಗಿ ಮುಂದಿನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಸಂಪೂರ್ಣ ನ್ಯಾಯ ಒದಗಿಸಲಿದೆ ಎಂಬ ಭರವಸೆ ನಮಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.