ADVERTISEMENT

ವಕ್ಫ್‌ ಮಸೂದೆಗೆ ಬೆಂಬಲ: ಮಣಿಪುರ ಬಿಜೆಪಿ ಮುಖಂಡನ ಮನೆಗೆ ಬೆಂಕಿ

ಪಿಟಿಐ
Published 6 ಏಪ್ರಿಲ್ 2025, 22:20 IST
Last Updated 6 ಏಪ್ರಿಲ್ 2025, 22:20 IST
-
-   

ಇಂಫಾಲ್‌: ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಅವರ ಮನೆಗೆ ಗುಂಪೊಂದು ಭಾನುವಾರ ರಾತ್ರಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ಈ ಘಟನೆ ನಡೆದಿದೆ.

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶನಿವಾರ ಪೋಸ್ಟ್‌ ಮಾಡಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಗುಂಪು, ರಾತ್ರಿ 9ರ ವೇಳೆಗೆ ಅವರ ನಿವಾಸದ ಮುಂದೆ ಜಮಾಯಿಸಿತ್ತು. ನಿವಾಸವನ್ನು ಧ್ವಂಸಗೊಳಿಸಿದ್ದಲ್ಲದೇ, ಬೆಂಕಿ ಹಚ್ಚಿತು ಎಂದು ತಿಳಿಸಿದ್ದಾರೆ.

ADVERTISEMENT

ಈ ಘಟನೆ ಬೆನ್ನಲ್ಲೇ, ಕ್ಷಮೆ ಕೋರಿರುವ ಅಲಿ, ಮಸೂದೆಗೆ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.