ಅಗ್ನಿ ಅವಘಡ
(ಸಾಂದರ್ಭಿಕ ಚಿತ್ರ)
ಐಜ್ವಾಲ್: ಮಿಜೋರಾಂನ ಲಾಂಗ್‌ಟಲಾಯಿ ಜಿಲ್ಲೆಯಲ್ಲಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 8 ಮನೆಗಳು ಮತ್ತು ನಾಲ್ಕು ಅಂಗಡಿಗಳು ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಐಜ್ವಾಲ್‌ನಿಂದ 155 ಕಿ.ಮೀ ದೂರದಲ್ಲಿರುವ ಡಿಲ್ಟಾಲಂಗ್ ಗ್ರಾಮದಲ್ಲಿ ಬೆಳಗಿನ ಜಾವ 1:30ರ ಸುಮಾರಿಗೆ ಅವಘಡ ಸಂಭವಿಸಿದೆ. ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಪೊಲೀಸರು ಹಾಗೂ ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಒಟ್ಟು ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.