ADVERTISEMENT

ಕಾಶ್ಮೀರದ ದೋಡಾದಲ್ಲಿ ಬಿರುಕು ಬಿಟ್ಟ ಮನೆಗಳು: 19 ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ

ಪಿಟಿಐ
Published 3 ಫೆಬ್ರುವರಿ 2023, 13:30 IST
Last Updated 3 ಫೆಬ್ರುವರಿ 2023, 13:30 IST
ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯ ನಯೀ ಬಸ್ತಿ ಪ್ರದೇಶದಲ್ಲಿನ ಕೆಲ ಮನೆಗಳಲ್ಲಿ ಬಿರುಕು ಉಂಟಾಗಿದೆ –ಪಿಟಿಐ ಚಿತ್ರ 
ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯ ನಯೀ ಬಸ್ತಿ ಪ್ರದೇಶದಲ್ಲಿನ ಕೆಲ ಮನೆಗಳಲ್ಲಿ ಬಿರುಕು ಉಂಟಾಗಿದೆ –ಪಿಟಿಐ ಚಿತ್ರ    

ದೋಡಾ/ಜಮ್ಮು: ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯ ಕೆಲವೆಡೆ ಮನೆಗಳು ಬಿರುಕು ಬಿಟ್ಟಿದ್ದು, 19 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕಿಶ್ತ್ವಾರ್– ಬಟೊಟೆ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ದೋಡಾದಿಂದ 30 ಕಿ.ಮೀ. ದೂರದಲ್ಲಿರುವ ನಯೀ ಬಸ್ತಿ ಗ್ರಾಮದಲ್ಲಿರುವ ಮಸೀದಿ ಹಾಗೂ ಬಾಲಕಿಯರ ಧಾರ್ಮಿಕ ಶಿಕ್ಷಣ ಕೇಂದ್ರವು ಸುರಕ್ಷಿತವಾಗಿಲ್ಲ ಎಂದು ಜಿಲ್ಲಾಡಳಿತ ಘೋಷಿಸಿದೆ.

ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ಕೆಲವು ಮನೆಗಳು ಬಿರುಕುಬಿಟ್ಟಿದ್ದವು, ಆದರೆ, ಗುರುವಾರ ಭೂಕುಸಿತವು ಉಲ್ಬಣಗೊಂಡಿದ್ದು ಬಿರುಕುಬಿಟ್ಟ ಮನೆಗಳ ಸಂಖ್ಯೆ 21ಕ್ಕೆ ಏರಿದೆ.

ADVERTISEMENT

‘19 ಸಂತ್ರಸ್ತ ಕುಟುಂಬಗಳನ್ನು ನಾವು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದೇವೆ. ನಾವು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದು ಥಾತ್ರಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅಥರ್ ಅಮೀನ್ ಜರ್ಗರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.