ADVERTISEMENT

ಭಾರತವು ಪ್ರತ್ಯೇಕವಾಗಿ ಉಳಿಯುವ ಅಪಾಯವಿದೆ ಎಂದಿದ್ದ ಒಬಾಮಗೆ ರಾಜನಾಥ್‌ ಸಿಂಗ್‌ ತಿರುಗೇಟು

​ಪ್ರಜಾವಾಣಿ ವಾರ್ತೆ
Published 26 ಜೂನ್ 2023, 18:54 IST
Last Updated 26 ಜೂನ್ 2023, 18:54 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌   

ಶ್ರೀನಗರ: ‘ಮುಸ್ಲಿಮರ ಹಕ್ಕುಗಳನ್ನು ಗೌರವಿಸದೆ ಇದ್ದರೆ ಭಾರತವು ಪ್ರತ್ಯೇಕವಾಗಿ ಉಳಿಯುವ ಅಪಾಯವಿದೆ’ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ ರಾಜನಾಥ್‌ ಸಿಂಗ್‌, ‘ನಿಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎಂಬುದನ್ನು ಮೊದಲು ನೆನಪಿಸಿಕೊಳ್ಳಿ’ ಎಂದಿದ್ದಾರೆ.

‘ಭಾರತವು ವಸುದೈವ ಕುಟುಂಬ ತತ್ವದ ಮೇಲೆ ನಂಬಿಕೆ ಇಟ್ಟಿದೆ. ಇದನ್ನು ಒಬಾಮ ಮರೆತಿದ್ದಾರೆ. ನೀವು ನಡೆಸಿರುವ ದಾಳಿಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದಿದ್ದಾರೆ.

‘ಭಾರತದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಎಲ್ಲಾ ಪಂಗಡಗಳು ಒಟ್ಟಾಗಿ ಬದುಕುತ್ತಿವೆ. ಇದನ್ನು ವಿಶ್ವದ ಬೇರೆ ಎಲ್ಲಿಯೂ ಕಾಣಲು ಸಾಧ್ಯವಿಲ್ಲ’ ಎಂದರು.

ADVERTISEMENT

ನಿರ್ಮಲಾ ಸೀತಾರಾಮನ್ ಚಾಟಿ: ‘ಒಬಾಮ ತಮ್ಮ ಅಧಿಕಾರಾವಧಿಯಲ್ಲಿ ವಿಶ್ವದ ಪ್ರಮುಖ ಆರು ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್‌ ದಾಳಿ ನಡೆಸಿದ್ದಾರೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭಾನುವಾರ ಟೀಕಿಸಿದ್ದರು. ಪ್ರಧಾನಿ ಮೋದಿ ಅವರು 13 ದೇಶಗಳ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದಿದ್ದಾರೆ. ಈ ಪೈಕಿ ಆರು ಮುಸ್ಲಿಂ ರಾಷ್ಟ್ರಗಳಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.