ADVERTISEMENT

ಹಿಮಾಚಲ ಪ್ರದೇಶ: ಅಂಗನವಾಡಿ ಕಾರ್ಯಕರ್ತೆ ಮೇಲೆ ಅತ್ಯಾಚಾರ, ಹಲ್ಲೆ ಆರೋಪ

ಪಿಟಿಐ
Published 17 ಫೆಬ್ರುವರಿ 2025, 13:07 IST
Last Updated 17 ಫೆಬ್ರುವರಿ 2025, 13:07 IST
<div class="paragraphs"><p>ಅತ್ಯಾಚಾರ (ಸಾಂದರ್ಭಿಕ ಚಿತ್ರ)</p></div>

ಅತ್ಯಾಚಾರ (ಸಾಂದರ್ಭಿಕ ಚಿತ್ರ)

   

ಹಮೀರ್‌ಪುರ: ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿ ಮಹಿಳಾ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಗುತ್ತಿಗೆದಾರನೊಬ್ಬ ಅತ್ಯಾಚಾರ ಎಸಗಿ, ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪ ಕೇಳಿಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಮೀರ್‌ಪುರದ ನಿವಾಸಿ ಸೋಮ್‌ದತ್‌ ಎಂಬ ಗುತ್ತಿಗೆದಾರ ಕಳೆದ ಎರಡು ವರ್ಷಗಳಿಂದ ತನ್ನನ್ನು ಹೆದರಿಸಿ ಅತ್ಯಾಚಾರ ನಡೆಸುತ್ತಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಅವರು ಹೇಳಿದ್ದಾರೆ.

ADVERTISEMENT

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.