ಅಪಘಾತ
–ಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ಮುಂದೆ ಹೋಗುತ್ತಿದ್ದ ಸಾರಿಗೆ ಬಸ್ ಅನ್ನು ಹಿಂದಿಕ್ಕಲು ಹೋಗಿ, ನಿಯಂತ್ರಣ ತಪ್ಪಿ ಬಸ್ ಅಡಿ ಸಿಲುಕಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಶನಿವಾರ ತಾಲ್ಲೂಕಿನ ಕುಸುಗಲ್- ಬ್ಯಾಹಟ್ಟಿ ರಸ್ತೆ ಮಧ್ಯೆ ನಡೆದಿದೆ.
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದ ನಿವಾಸಿ ರೈಲ್ವೆ ನೌಕರರ ಬಸವರಾಜ ಹನಸಿ (45) ಮೃತಪಟ್ಟ ವ್ಯಕ್ತಿ. ಇವರು ಅಳಗವಾಡಿಯಿಂದ ಹುಬ್ಬಳ್ಳಿಗೆ ಬೈಕ್ ಮೇಲೆ ಬರುತ್ತಿದ್ದಾಗ, ಎದುರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಅನ್ನು ಹಿಂದೆ ಹಾಕಲು ಯತ್ನಿಸಿದ್ದಾರೆ. ಆಗ ಬೈಕ್ ನಿಯಂತ್ರಣ ತಪ್ಪಿ, ಅವರು ಬಸ್ ಅಡಿಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ನಗರದ ಕೆಎಂಸಿ-ಆರ್‌ಐ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.