ಪ್ರಾತಿನಿಧಿಕ ಚಿತ್ರ
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನ್ಯೂ ಕೀಥೆಲ್ಮಾನ್ಬಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ಜಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.
ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 7.62 ಎಂಎಂ ಸ್ನೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಸೇರಿವೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.