ಶ್ರೀನಗರ: ಜಮ್ಮು–ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರ್ನಾಹ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ರಫಾಕತ್ ಹುಸೇನ್ ಶಾ ಎಂಬಾತನ ಮನೆಯಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರವನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಶೋಧದ ವೇಳೆ ಮನೆಯಲ್ಲಿ ಒಂದು ಪಿಸ್ತೂಲ್, ಎರಡು ಪಿಸ್ತೂಲ್ ಮ್ಯಾಗಜೈನ್, 16 ಪಿಸ್ತೂಲ್ ರೌಂಡ್ಸ್, 2 ಹ್ಯಾಂಡ್ ಗ್ರೇನೇಡ್, 2 ಡೆಟೋನೇಟರ್ಸ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.