ಶ್ರೀನಗರ: ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಮಾರ್ಟರ್ ಬಾಂಬ್ ಮತ್ತು ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಅವಂತಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಈ ವೇಳೆ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ವಶಪಡಿಸಿಕೊಂಡಿರುವ ಸ್ಫೋಟಕಗಳನ್ನು ಭಯೋತ್ಪಾದಕರು ಭೂಮಿಯಲ್ಲಿ ಅಡಗಿಸಿಟ್ಟಿದ್ದರು ಎಂಬುದು ತಿಳಿದು ಬಂದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.