ನವದೆಹಲಿ: ಸ್ಕೂಟರ್ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳದಲ್ಲಿ ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರ ಸಂಬಂಧಿ ಆಸಿಫ್ ಖುರೇಷಿಯನ್ನು ಹತ್ಯೆ ಮಾಡಲಾಗಿದೆ.
ಆಗ್ನೇಯ ದೆಹಲಿಯ ಭೋಗಲ್‌ನ ಚರ್ಚ್ ಲೇನ್‌ನಲ್ಲಿ ಪಾರ್ಕಿಂಗ್ ವಿಚಾರಕ್ಕೆ ಗುರುವಾರ ತಡ ರಾತ್ರಿ ಜಗಳ ನಡೆದಿದ್ದು ಘಟನೆಯಲ್ಲಿ ಆಸಿಫ್ ಖುರೇಷಿ ಮೃತಪಟ್ಟಿದ್ದಾರೆ.
ಆಸೀಪ್ ಹಾಗೂ ಇಬ್ಬರು ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ಹೆಚ್ಚಾಗುತ್ತಿದ್ದಂತೆ ಅಸಿಪ್ ಮೇಲೆ ಯುವಕರು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಅಸಿಪ್ ಎದೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಸಿಪ್ ದಾರಿ ಮಧ್ಯೆಯೇ ಮೃತಪಟ್ಟರು ಎಂದು ವೈದ್ಯರು ಹೇಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉಜ್ವಲ್ (19), ಗೌತಮ್ (18) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಮನೆ ಕೂಡ ಅಸಿಪ್ ನಿವಾಸದಿಂದ ಕೆಲವೇ ಮೀಟರ್‌ಗಳ ದೂರದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಿಜಾಮುದ್ದೀನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.