ADVERTISEMENT

ಇಂದು ವಿಶ್ವ ಮಾನವ ಹಕ್ಕುಗಳ ದಿನ: ಈ ದಿನದ ಇತಿಹಾಸ, ಮಹತ್ವ ಹೀಗಿದೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2025, 7:43 IST
Last Updated 10 ಡಿಸೆಂಬರ್ 2025, 7:43 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಎ.ಐ ಚಿತ್ರ) 

ಪ್ರತಿ ವರ್ಷ ಡಿಸೆಂಬರ್ 10ರಂದು 'ವಿಶ್ವ ಮಾನವ ಹಕ್ಕುಗಳ ದಿನ'ವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಉದ್ದೇಶ ಹಾಗೂ ಮಹತ್ವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾನವ ಹಕ್ಕುಗಳ ದಿನದ ಹಿನ್ನೆಲೆ/ ಇತಿಹಾಸ

ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948 ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಡಿಸೆಂಬರ್ 10ರಂದು 'ವಿಶ್ವ ಮಾನವ ಹಕ್ಕುಗಳ ದಿನ'ವನ್ನು ಆಚರಿಸಲಾಗುತ್ತಿದೆ. 1950ರ ಡಿಸೆಂಬರ್ 10ರಂದು ಪ್ಯಾರಿಸ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಮಾನವ ಹಕ್ಕುಗಳ ಬಗ್ಗೆ ಉಲ್ಲೇಖಿಸಲಾಯಿತು.

ADVERTISEMENT
ಮಾನವ ಹಕ್ಕುಗಳ ದಿನದ ಉದ್ದೇಶ
ಯಾವುದೇ ಧರ್ಮ, ಜಾತಿ, ಲಿಂಗ, ಜನಾಂಗ, ಬಣ್ಣ, ಭಾಷೆಯ ಭೇದವಿಲ್ಲದೆ ಎಲ್ಲರೂ ಸಮಾನರು ಎಂದು ಸಾರುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಮಾನವ ಹಕ್ಕುಗಳು ಯಾವುವು?

ಜೀವಿಸುವ ಹಕ್ಕು, ವಾಕ್ ಸ್ವಾತಂತ್ರ್ಯ, ಆಹಾರ, ಶಿಕ್ಷಣ, ಸಾಮಾಜಿಕ ಭದ್ರತೆ, ಸಂಘಟನೆ, ರಾಷ್ಟ್ರೀಯತೆ, ರಕ್ಷಣೆ, ಆರೋಗ್ಯ, ಧಾರ್ಮಿಕ ಸ್ವಾತಂತ್ರ್ಯದ ಜತೆಗೆ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವುದು ಮಾನವ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತವೆ.

ಮಾನವ ಹಕ್ಕುಗಳ ದಿನ 2025ರ ಥೀಮ್
ಮಾನವ ಹಕ್ಕುಗಳ ದಿನ 2025ರ ಥೀಮ್ 'ಮಾನವ ಹಕ್ಕುಗಳು, ನಮ್ಮ ದೈನಂದಿನ ಅಗತ್ಯಗಳು' (Human Rights, Our Everyday Essentials) ಎಂಬುವುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.