ADVERTISEMENT

ಮಾನವೀಯತೆಗಿಂತ ದೊಡ್ಡದು ಯಾವುದೂ ಇಲ್ಲ..ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2025, 10:33 IST
Last Updated 31 ಅಕ್ಟೋಬರ್ 2025, 10:33 IST
<div class="paragraphs"><p>ಇನ್‌ಸ್ಟಾಗ್ರಾಮ್‌@Ashwani Kumar<br></p></div>

ಇನ್‌ಸ್ಟಾಗ್ರಾಮ್‌@Ashwani Kumar

   

ಲಖನೌ: ಉತ್ತರ ಪ್ರದೇಶದ ಪೊಲೀಸ್‌ ಅಧಿಕಾರಿಯೊಬ್ಬರು ಅಂಗವಿಕಲ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡಿದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೃತಕ ಕಾಲು ಹೊಂದಿರುವ ವ್ಯಕ್ತಿಯೊಬ್ಬರು ರೈಲಿನಲ್ಲಿ ಪ್ರಯಾಣಿಸುವ ಸಲುವಾಗಿ ರೈಲ್ವೆ ಸ್ಟೇಷನ್‌ನ ಮೆಟ್ಟಿಲುಗಳನ್ನು ಇಳಿಯಲು ಕಷ್ಟಪಡುತ್ತಿದ್ದರು. ಈ ವೇಳೆ ಪೊಲೀಸ್‌ ಅಧಿಕಾರಿ ಅಶ್ವನಿ ಕುಮಾರ್ ಎಂಬುವವರು ಆತನನ್ನು ಹೆಗಲ ಮೇಲೆ ಹೊತ್ತುಕೊಂಡು, ಜನದಟ್ಟಣೆಯಿಂದ ತುಂಬಿದ್ದ ಪ್ಲಾಟ್‌ಫಾರ್ಮ್‌ನಲ್ಲಿ ರೈಲು ಹತ್ತಲು ಸಹಾಯ ಮಾಡಿದ ದೃಶ್ಯಗಳು ವಿಡಿಯೊದಲ್ಲಿವೆ.

ADVERTISEMENT

ಇದೀಗ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪೊಲೀಸ್‌ ಅಧಿಕಾರಿಯ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಕೆಲಸಕ್ಕೆ ನೆಟ್ಟಿಗರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಪೊಲೀಸ್‌ ಅಧಿಕಾರಿ ಅಶ್ವನಿ ಕುಮಾರ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, 'ಮಾನವೀಯತೆಗಿಂತ ದೊಡ್ಡದು ಯಾವುದು ಇಲ್ಲ. ಸಹಾಯ ಮಾಡಲು ಹಣ ಬೇಕಾಗಿಲ್ಲ, ಮಾಡುವ ಮನಸ್ಸಿದ್ದರೆ ಸಾಕು' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಮೂಲಕ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂಬ ಸಂದೇಶವನ್ನು ಅಶ್ವನಿ ಕುಮಾರ್ ಸಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.