ಕೋಲ್ಕತ್ತ: ವಾಕ್ ಸ್ವಾತಂತ್ರ್ಯವನ್ನು ಧಮನಿಸುವ ಮತ್ತು ದ್ವೇಷವನ್ನು ಉತ್ತೇಜಿಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಧ್ವನಿ ಎತ್ತುವ ಅಗತ್ಯವಿದೆ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ.
46ನೇ ಕೋಲ್ಕತ್ತ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಲವರು ದೇಶದಲ್ಲಿ ನಕಾರಾತ್ಮಕತೆ ಹರಡಲು ಪ್ರಯತ್ನಿಸುತ್ತಿರುವುದನ್ನು ಕಂಡಾಗ ನೋವಾಗುತ್ತಿದೆ ಎಂದೂ ಹೇಳಿದ್ದಾರೆ.
‘ಕೋಲ್ಕತ್ತ ಪುಸ್ತಕ ಮೇಳವು ಶಾಂತಿ, ಏಕತೆ ಮತ್ತು ವೈವಿಧ್ಯತೆಯನ್ನು ಬಿಂಬಿಸುತ್ತದೆ’ ಎಂದೂ ಅವರು ಬಣ್ಣಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.