ADVERTISEMENT

ಪತ್ನಿಯನ್ನು ಕೊಂದು ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ ನಿವೃತ್ತ ಸೈನಿಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜನವರಿ 2025, 5:25 IST
Last Updated 23 ಜನವರಿ 2025, 5:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ

ಹೈದರಾಬಾದ್‌: ನಿವೃತ್ತ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್‌ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಡೆದಿದೆ.

ADVERTISEMENT

ನಿವೃತ್ತ ಸೈನಿಕ ಗುರುಮೂರ್ತಿ ಎಂಬಾತ ತಮ್ಮ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ಜನವರಿ 18ರಂದು (ಶನಿವಾರ) ಮೀರಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ತನಿಖಾಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಿದಾಗ ಆಘಾತಕಾರಿ ವಿಚಾರ ‌ಬಹಿರಂಗಗೊಂಡಿದೆ.

ಪತ್ನಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ಹಾಕಿ ಬೇಯಿಸಿದ್ದಾಗಿ ಆತ ಪೊಲೀಸರಿಗೆ ತಿಳಿಸಿದ್ದಾನೆ. ಬಳಿಕ ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದ್ದಾಗಿಯೂ ತಿಳಿಸಿದ್ದಾನೆ. ಆತನ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದ್ದಾರೆ. ಕೆರೆಯಲ್ಲಿ ದೇಹದ ಭಾಗಗಳಿಗಾಗಿ ಹುಡುಕಾಟ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುಮೂರ್ತಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತರಾದ ನಂತರ ಕಾಂಚನ್ ಬಾಗ್‌ನಲ್ಲಿರುವ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುಮಾರು 13 ವರ್ಷಗಳ ಹಿಂದೆ ಮಾಧವಿ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಯನ್ನು ಕೊಂದ ಬಳಿಕ ಆರೋಪಿಯು ತನ್ನ ಮೇಲೆ ಅನುಮಾನ ಬರಬಾರದೆಂದು ತನ್ನ ಪೋಷಕರೊಂದಿಗೆ ತೆರಳಿ ಮೀರ್‌ಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.