
ಗ್ವಾಲಿಯರ್: ತನ್ನ ಕೈಯಲ್ಲಿ ಅಡುಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ, ಕುಡಿದ ಮತ್ತಿನಲ್ಲಿದ್ದ ಪತಿಯು ಆಕೆಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋನು ತೋಮರ್(45) ಕೊಲೆ ಆರೋಪಿಯಾಗಿದ್ದಾರೆ. ಶನಿವಾರ (ಫೆ.7) ರಾತ್ರಿ 11 ಗಂಟೆಯ ಸುಮಾರಿಗೆ ಕುಡಿದ ಮತ್ತಿನಲ್ಲಿ ಮನೆಗೆ ಆಗಮಿಸಿದ ಆತ, ಹೆಂಡತಿಗೆ ಅಡುಗೆ ಮಾಡುವಂತೆ ಒತ್ತಾಯಿಸಿದ್ದಾನೆ. ಅನಾರೋಗ್ಯದ ಕಾರಣ ಪತ್ನಿಯು ಅಡುಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದಕ್ಕೆ ಕೋಪಗೊಂಡ ಆರೋಪಿ, ಅವಳಿಗೆ ಗುಂಡಿಕ್ಕಿ ಕೊಂದಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ದಂಪತಿಗೆ 14 ವರ್ಷದ ಮಗಳು ಹಾಗೂ 11 ವರ್ಷದ ಮಗನಿದ್ದಾನೆ. ಘಟನೆಯ ವೇಳೆ, ಆರೋಪಿಯ ತಂದೆ ತಾಯಿಗಳು ಕೂಡ ಮನೆಯಲ್ಲಿದ್ದರು ಎಂದು ಹೇಳಿದ್ದಾರೆ.
ಆರೋಪಿಯ ತಂದೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.