ಗೋಪಾಲ್‌ಗಂಜ್: ಇಲ್ಲಿನ ಹತುವಾ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಯೊಬ್ಬ ಕುಟುಂಬವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪತಿ-ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರ ಪುತ್ರನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ನೀಡುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿಯ ಮತ್ತೊಬ್ಬ ಪುತ್ರ ಉತ್ತರ ಪ್ರದೇಶದ ಗೋರಖ್‌ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆ ಕುರಿತಾಗಿ ಮಾಹಿತಿ ಲಭ್ಯವಾಗಿದ್ದು, ತನಿಖೆಯನ್ನು ಕೈಗೊಂಡಿದ್ದೇವೆ ಎಂದು ಬಿಹಾರದ ಡಿಜಿಪಿ ಗುಪ್ತೇಶ್ವರ್ ಪಾಂಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.