ADVERTISEMENT

ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ತಿವಿದು ಕೊಲೆ

ಪಿಟಿಐ
Published 18 ಅಕ್ಟೋಬರ್ 2025, 15:52 IST
Last Updated 18 ಅಕ್ಟೋಬರ್ 2025, 15:52 IST
.
.   

ಹೈದರಾಬಾದ್‌: ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಶೇಖ್‌ ರಿಯಾಜ್‌ (24) ಎಂಬಾತ ನಿಜಾಮಾಬಾದ್‌ ಠಾಣೆಗೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಕಾನ್‌ಸ್ಟೆಬಲ್‌ ಇ.ಪ್ರಮೋದ್‌ (42) ಅವರ ಎದೆಗೆ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ.

ಶುಕ್ರವಾರ ರಾತ್ರಿ 8.30ರಿಂದ 9ರ ಅವಧಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿಯು ಚಾಕುವನ್ನು ಶೂ ಒಳಗೆ ಇರಿಸಿಕೊಂಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಪ್ರಮೋದ್‌ ಅಸುನೀಗಿದ್ದಾರೆ. ಕಾನ್‌ಸ್ಟೆಬಲ್‌ ಬೈಕ್‌ ಹಿಂಬಾಲಿಸುತ್ತಿದ್ದ ಸಬ್‌ ಇನ್‌ಸ್ಪೆಕ್ಟರ್‌ ಮೇಲೆಯೂ ಆರೋಪಿಯು ದಾಳಿ ನಡೆಸಿದ್ದು, ಅವರ ಬೆರಳುಗಳಿಗೆ ಗಾಯಗಳಾಗಿವೆ. ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.