ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಅಂಗವಾಗಿ ಆಯೋಜನೆಗೊಂಡಿದ್ದ ರಥ ಸಂಚಾರದಲ್ಲಿ ವಾಹನಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ನಾಲ್ವರಿಗೆ ಗಾಯಗಳಾಗಿವೆ.
ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ. ವಾಹನ ಮೇಲೆ ರಥವನ್ನಿಟ್ಟು, ಅದರಲ್ಲಿ ಕೃಷ್ಣನ ಮೂರ್ತಿಯ ಮೆರವಣಿಗೆ ನಡೆಸಲಾಗುತ್ತಿತ್ತು.
ರಾಮನಾಥಪುರ ಪ್ರದೇಶದಲ್ಲಿ ಸೋಮವಾರ ನಸುಕಿನ 1.30ರ ಹೊತ್ತಿಗೆ ಮೆರವಣಿಗೆ ಸಾಗಿತ್ತು. ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ವಾಹನ ಸಿಲುಕಿದೆ. ಇದರಿಂದ ತಂತಿ ತುಂಡಾದ ಪರಿಣಾಮ ವಾಹನದ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟು ಐವರಿಗೆ ವಿದ್ಯುತ್ ಆಘಾತವಾಗಿದೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.