ADVERTISEMENT

ತೆಲಂಗಾಣದಲ್ಲಿ ಖೋಟಾ ನೋಟು ಜಾಲ: ಐವರ ಬಂಧನ, ₹16 ಲಕ್ಷದ ನಕಲಿ ನೋಟು ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2021, 3:35 IST
Last Updated 20 ಆಗಸ್ಟ್ 2021, 3:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್‌: ನಕಲಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಅಂಜನಿ ಕುಮಾರ್ ಕಾರ್ಯಾಚರಣೆಯ ಮಾಹಿತಿ ನೀಡಿದ್ದಾರೆ.

‘ಐದು ಮಂದಿಯನ್ನು ಬಂಧಿಸಲಾಗಿದ್ದು, ₹16 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳು ಸೇರಿದಂತೆ ಒಂದು ಲ್ಯಾಪ್‌ಟಾಪ್‌ ವಶ ಪಡಿಸಿಕೊಳ್ಳಲಾಗಿದೆ. ಜತೆಗೆ, ತನಿಖೆ ಮುಂದುವರಿಸಲಾಗಿದೆ’ ಎಂದಿದ್ದಾರೆ.

ADVERTISEMENT

ಬಂಧಿತರನ್ನು ಸಂತೋಷ್ ಕುಮಾರ್ (29), ಸಾಯಿ ಕುಮಾರ್ (24), ನೀರಜ್ ಕುಮಾರ್ (21), ರಾಮ್ (20), ಶ್ರೀನಿವಾಸ್ (31) ಎಂದು ಗುರುತಿಸಲಾಗಿದೆ.

‘ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಕುಮಾರ್, ಫೋಟೊ ಸ್ಟುಡಿಯೊ ನಡೆಸುತ್ತಿದ್ದು, ಸ್ನೇಹಿತರೊಂದಿಗೆ ಸೇರಿ 500 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿ ಪೊಲೀಸರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.