ADVERTISEMENT

ಹೈದರಾಬಾದ್ ಪೊಲೀಸ್ ಕಮಿಷನರ್ ಆಗಿ ಹುಬ್ಬಳ್ಳಿ ಮೂಲದ ವಿ.ಸಿ. ಸಜ್ಜನರ ನೇಮಕ

ಪಿಟಿಐ
Published 27 ಸೆಪ್ಟೆಂಬರ್ 2025, 7:29 IST
Last Updated 27 ಸೆಪ್ಟೆಂಬರ್ 2025, 7:29 IST
<div class="paragraphs"><p>ವಿ.ಸಿ. ಸಜ್ಜನರ</p></div>

ವಿ.ಸಿ. ಸಜ್ಜನರ

   

ಹೈದರಾಬಾದ್: ಹುಬ್ಬಳ್ಳಿ ಮೂಲದ ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ ಅವರು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.

ವಿ.ಸಿ. ಸಜ್ಜನರ ಅವರು ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ADVERTISEMENT

ಇನ್ಮುಂದೆ ಮುಂದಿನ ಆದೇಶದವರೆಗೆ ಹೈದರಾಬಾದ್‌ ಅಂತಹ ದೊಡ್ಡ ನಗರದ ಪೊಲೀಸ್ ಮುಖ್ಯಸ್ಥರಾಗಿ ವಿ.ಸಿ. ಸಜ್ಜನರ ಕಾರ್ಯನಿರ್ವಹಿಸಲಿದ್ದಾರೆ.

ಹೈದರಾಬಾದ್‌ ನಗರ ಪೊಲೀಸ್ ಕಮಿಷನರ್ ಆಗಿದ್ದ ಸಿ.ವಿ. ಆನಂದ್ ಅವರನ್ನು ಗೃಹ ಇಲಾಖೆ ವಿಶೇಷ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಒಟ್ಟು 27 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸಿಎಂ ರೇವಂತ್ ರೆಡ್ಡಿ ಆದೇಶಿಸಿದ್ದಾರೆ.

2019 ನವೆಂಬರ್ 29 ರಂದು ಹೈದರಾಬಾದ್ ಹೊರವಲಯದಲ್ಲಿ ಪ್ರಿಯಾಂಕಾ ರೆಡ್ಡಿ ಎನ್ನುವ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದು ಆಕೆಯ ದೇಹ ಸುಟ್ಟು ಹಾಕಿದ್ದರು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ನಾಲ್ವರೂ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಆಗ ಸೈಬರಾಬಾದ್ ಪೊಲೀಸ್ ಕಮಿಷನರ್ ಆಗಿ ವಿಶ್ವನಾಥ್ ಸಜ್ಜನರ ಕಾರ್ಯನಿರ್ವಹಿಸುತ್ತಿದ್ದರು.

ತೆಲಂಗಾಣದಲ್ಲಿ ವಿ.ಸಿ. ಸಜ್ಜನರ ಅವರ ‘ಸೂಪರ್ ಕಾಪ್’ ಎಂದು ಹೆಸರು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.