
ಪ್ರಜಾವಾಣಿ ವಾರ್ತೆ
ಹೈದರಾಬಾದ್: ನಲ್ಗೊಂಡ ಜಿಲ್ಲೆಯ ಚಿಟ್ಯಾಲ ತಾಲ್ಲೂಕಿನ ಪಿಟ್ಟಂಪಲ್ಲಿ ಗ್ರಾಮದ ಬಳಿ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಕನಿಷ್ಠ 29 ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.
ಬಸ್ ಹೈದರಾಬಾದ್‌ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಬಸ್‌ನ ಎಂಜಿನ್‌ನಿಂದ ಹೊಗೆ ಕಾಣಿಸಿಕೊಂಡಿದ್ದನ್ನು ಚಾಲಕ ಗಮನಿಸಿದ್ದರು. ತಕ್ಷಣವೆ ಕಾರ್ಯಪ್ರವೃತ್ತರಾದ ಅವರು, ತುರ್ತು ನಿರ್ಗಮನ ಬಾಗಿಲನ್ನು ತೆರೆದು ಎಲ್ಲರೂ ಸುರಕ್ಷಿತವಾಗಿ ಇಳಿಯಲು ನೆರವಾಗಿದ್ದಾರೆ.
ನಾಗಾಲ್ಯಾಂಡ್‌ನಲ್ಲಿ ನೋಂದಣಿಯಾಗಿರುವ ಬಸ್ ಅನ್ನು ವಿಹಾರ್ ಟ್ರಾಲೆಲ್ಸ್ ಸಂಸ್ಥೆ ನಿರ್ವಹಿಸುತ್ತಿತ್ತು. ಘಟನೆಯಲ್ಲಿ ಬಸ್ ಸಂಫೂರ್ಣವಾಗಿ ಸುಟ್ಟುಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.