ಹೈದರಾಬಾದ್: ತೆಲಂಗಾಣದ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ನೀರಿನ ತೊಟ್ಟಿಗೆ ಕೀಟನಾಶಕ ಬೆರೆಸಿದ್ದ ಪ್ರಕರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಆ.22 ರಂದು ಘಟನೆ ಜರುಗಿದ್ದು, ನೀರು ಸೇವಿಸಿದ್ದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.
'ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ, ಶಾಲೆಯ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಶಾಲೆಯ ವಿಜ್ಞಾನ ಶಿಕ್ಷಕ ಕೃತ್ಯ ಎಸಗಿದ್ದಾರೆ. ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಶಾಲೆಯ ನೀರಿನ ತೊಟ್ಟಿಯಲ್ಲಿ ಕಲಬೆರಕೆ ಅಂಶವಿರುವುದನ್ನು ವಿದ್ಯಾರ್ಥಿಗಳು ಗಮನಿಸಿ, ಶಾಲಾ ಆಡಳಿತದ ಗಮನಕ್ಕೆ ತಂದಿದ್ದರು. ಘಟನೆಗೆ ಸಂಬಂಧಿಸಿದಂತೆ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 109ರ ಅಡಿಯಲ್ಲಿ ಕೊಲೆ ಯತ್ನ ಆರೋಪದಡಿಯಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.