ADVERTISEMENT

ಭೂಮಿ ವಿವಾದ: ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಏಜೆನ್ಸೀಸ್
Published 1 ಏಪ್ರಿಲ್ 2025, 6:20 IST
Last Updated 1 ಏಪ್ರಿಲ್ 2025, 6:20 IST
   

ಹೈದರಾಬಾದ್: ಇಲ್ಲಿನ ವಿಶ್ವವಿದ್ಯಾಲಯವೊಂದರ ಭೂ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ.

ತರಗತಿ ಬಹಿಷ್ಕರಿಸಿ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಯುಒಎಚ್‌ಎಸ್‌ಯು) ವಿದ್ಯಾರ್ಥಿಗಳು ಅನಿರ್ದಿಷ್ಟ ಪ್ರತಿಭಟನೆ ಆರಂಭಿಸಿದ್ದು ಕ್ಯಾಂಪಸ್‌ನಲ್ಲಿರುವ ಪೊಲೀಸ್‌ ಸಿಬ್ಬಂದಿ ಹಾಗೂ ಜೆಸಿಬಿ ಮತ್ತು ಇತರೆ ಯಂತ್ರಗಳನ್ನು ತೆರವುಗೊಳಿಸುವಂತೆ ಅವರು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯದ ಪಕ್ಕದಲ್ಲಿರುವ 400 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ವಶಪಡಿಸಿಕೊಳ್ಳು ಮುಂದಾಗಿದ್ದು ಈ ಭೂಮಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ADVERTISEMENT

ಸರ್ಕಾರ ಈ ಭೂಮಿಯನ್ನು ವಶಕ್ಕೆ ತೆಗೆದುಕೊಳ್ಳಬಾರದು ಎಂದು ಅವರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.