ADVERTISEMENT

ಹೈದರಾಬಾದ್‌: 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2026, 8:29 IST
Last Updated 10 ಜನವರಿ 2026, 8:29 IST
   

ಹೈದರಾಬಾದ್‌: ಕೌಟುಂಬಿಕ ಕಲಹದಿಂದ ಮನನೊಂದು 27 ವರ್ಷದ ಮಹಿಳೆಯೊಬ್ಬರು ತನ್ನ 10 ತಿಂಗಳ ಮಗುವಿಗೆ ವಿಷವುಣಿಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮಗಳು ಮತ್ತು ಮೊಮ್ಮಗನ ಸಾವಿನ ಸುದ್ದಿ ಕೇಳಿ ಅಜ್ಜಿ ಕೂಡ ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸುಷ್ಮಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಅವರನ್ನು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ಆಗಾಗ್ಗೆ ದಂಪತಿ ನಡುವೆ ಕಲಹವಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಕುಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಯಿ ಮನೆಗೆ ಹೋಗಿದ್ದ ಸುಷ್ಮಾ ಅವರು ಅಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಮಯದಲ್ಲಿ ಮಗುವಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಕೌಟುಂಬಿಕ ಕಲಹ ಆತ್ಮಹತ್ಯೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.